ಬೆಂಗಳೂರು: ಮುಖ್ಯಮಂತ್ರಿ ಕಾರ್ಯಾಲಯದ ಕಾರ್ಯದರ್ಶಿ ಹೆಸರಲ್ಲಿ ಕೆಪಿಎಸ್ಸಿ ಸದಸ್ಯ ಹುದ್ದೆ ಕೊಡಿಸೋದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಗದೀಶ್ ಬಂಧಿತ ಆರೋಪಿ. ಖಾಸಗಿ ಕಾಲೇಜು ಪ್ರೊಫೆಸರ್ ವೆಂಕಟೇಶ್ ಮುತ್ತಣ್ಣ ಎಂಬುವವರಿಗೆ ಕೆಪಿಎಸ್ಸಿ ಸದಸ್ಯ ಹುದ್ದೆ ಕೊಡಿಸೋದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಆರೋಪಿ ವಿರುದ್ಧ ಸಿಎಂ ಜಂಟಿ ಕಾರ್ಯದರ್ಶಿ ರಾಮಯ್ಯ, ತಮ್ಮ ಹೆಸರನ್ನು ಬಳಸಿಕೊಂಡು ಹುದ್ದೆ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸುತ್ತಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆ ಸಿಸಿಬಿ ಪೊಲೀಸರು ಆರೋಪಿ ಜಗದೀಶ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ; ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು



















