ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆಯ ಮೂಲಕ ಹಗಲು ಮನೆ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೇಯಸ್ ಮಠಪತಿ, ಶಿವಕುಮಾರ್ ಅರಗೊಡ್ಡಿ, ಅಭಿಶೇಕ ಚೌಗಲೆ ಬಂಧಿತ ಆರೋಪಿಗಳು. ಇತ್ತೀಚೆಗೆಗೆ ಅಥಣಿ ಪಟ್ಟಣದ ಮಹೇಶ್ ಕುಲಕರ್ಣಿ ಎಂಬುವವರ ಮನೆಯಲ್ಲಿ ಹಾಡು ಹಗಲಲ್ಲೆ ನಕಲಿ ಕೀ ಬಳಸಿ 170 ಗ್ರಾಮ ಚಿನ್ನಾಭರಣ ಹಾಗೂ 5 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ್ದರು.
ಈ ಸಂಬಂಧ ದೂರು ದಾಖಲಿಸಿಕೊಂಡ ಅಥಣಿ ಪೊಲೀಸರು ವಿಶೇಷ ತನಿಖೆ ನಡೆಸಿ, ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ 20 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಬೈಕ್ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು



















