ಬೆಂಗಳೂರು | ಮೈಸೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಲಭಿಸಿದೆ. ಹೌದು, ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ(AIISH Mysore Recruitment 2026) ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಡಿಯೋಲಜಿಸ್ಟ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ
ಒಟ್ಟು ಹುದ್ದೆಗಳು: 03
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಆಡಿಯೋಲಜಿಸ್ಟ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 27
ಒಂದು ಆಡಿಯೋಲಜಿಸ್ಟ್, ಎರಡು ಲಾಂಗ್ವೇಜ್ ಪ್ಯಾಥೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ aiishmysore.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Office of the Chief Administrative Officer, All India Institute of Speech & Hearing, Manasagangothri, Mysore – 570006
ಇದನ್ನೂ ಓದಿ : ಗಣರಾಜ್ಯೋತ್ಸವ | ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 22 ಮಂದಿಗೆ ಸೇವಾ ಪದಕ



















