ಬೀದರ್ : ನೀವೇನಾದರೂ ಬೀದರ್ ಜಿಲ್ಲೆಯವರಾಗಿದ್ದು, ರಾಜ್ಯ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 78 ಹುದ್ದೆಗಳ ನೇಮಕಾತಿಗಾಗಿ (KKRTC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 78 ಚಾಲಕರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)
ಒಟ್ಟು ಹುದ್ದೆ: 78
ಉದ್ಯೋಗ ಸ್ಥಳ: ಬೀದರ್
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಫೆಬ್ರವರಿ 04
ಎಸ್ಸೆಸ್ಸೆಲ್ಸಿ ಪಾಸಾದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆವಿ ವಾಹನ ಚಾಲನಾ ಪರವಾನಗಿ ಇರುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ 24ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲು kkrtc.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ನಡೆಯುವ ಸ್ಥಳ: ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಹಳೆಯ ಬಸ್ ನಿಲ್ದಾಣ, ಬೀದರ್ ವಿಭಾಗ, ಬೀದರ್.
ಇದನ್ನೂ ಓದಿ : 77ನೇ ಅದ್ಧೂರಿ ಗಣರಾಜ್ಯೋತ್ಸವಕ್ಕೆ ಮಾಣೆಕ್ ಷಾ ಮೈದಾನ ಸಜ್ಜು.. ಈ ಬಾರಿಯ ವಿಶೇಷತೆಗಳೇನು?



















