ನವದೆಹಲಿ : 2026ರ ಗಣರಾಜ್ಯೋತ್ಸವ ಸಂಭ್ರಮದಂದು ದೇಶವು ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ʻಅಶೋಕ ಚಕ್ರʼವನ್ನ ಪ್ರದಾನ ಮಾಡಿದ್ದಾರೆ.

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದಂತಹ ಮಹತ್ತರ ಕೀರ್ತಿ ಶುಭಾಂಶು ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ʻಅಶೋಕ ಚಕ್ರʼ ಶ್ರೇಷ್ಠ ಗೌರವವನ್ನ ನೀಡಲಾಗಿದೆ. ಈ ಪ್ರಶಸ್ತಿಯು ಶುಕ್ಲಾ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನ ಸ್ಮರಿಸುತ್ತದೆ.
ಶುಭಾಂಶು ಶುಕ್ಲಾಗೆ ಪ್ರಶಸ್ತಿ ನೀಡಿದ್ದೇಕೆ?
ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ 2025 ರ ಜೂನ್ 25 ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳಲ್ಲಿ ಶುಕ್ಲಾ ಕೂಡ ಒಬ್ಬರಾಗಿದ್ದರು. ಐಎಸ್‌ಎಸ್‌ನಲ್ಲಿ ಸುಮಾರು 18 ದಿನಗಳನ್ನ ಕಳೆದ ನಂತರ ಅವರು ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದರು.
ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿ ಶುಕ್ಲಾ ಇತರ ವಿಜ್ಞಾನಿಗಳೊಂದಿಗೆ 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನ ನಡೆಸಿದ್ದರು. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್ ಆಗಿದ್ದರು.
ಇದನ್ನೂ ಓದಿ : ಭಾರತದ ಜೊತೆ ಸ್ನೇಹ ಹಸ್ತ, ಪಾಕಿಸ್ತಾನಕ್ಕೆ ಬಿಗ್ ಶಾಕ್ | ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದ ಯುಎಇ


















