ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದಿದೆ.
ಇಂದು ದೇಶದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಈ ಕಾರ್ಯಕ್ರಮದ ಹಿನ್ನೆಲೆ ಮಂಚೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಧ್ವಜಾರೋಹಣ ವೇಳೆ ಶಾಲಾ ಶಿಕ್ಷಕರಿಂದಲೇ ಇಂತಹದೊಂದು ಎಡವಟ್ಟು ನಡೆದಿರುವ ಆರೋಪ ಕೇಳಿ ಬಂದಿದೆ.
ಗಣರಾಜ್ಯೋತ್ಸವದಂತಹ ಮಹತ್ವದ ದಿನದಂದು ಇಂತಹ ಅವಘಡ ಸಂಭವಿಸಿದ್ದು, ಸಂಭಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಉಡುಪಿ | ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್



















