ತುಮಕೂರು : ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಕಾರಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್ (42), ಅಭೀರ್ (44) ಹಾಗೂ ಆಂಧ್ರ ಪ್ರದೇಶ ಮೂಲದ ಸನ್ಮೋಕ್ತಿ (35) ಮೃತ ಸಾಫ್ಟ್ವೇರ್ ಎಂಜಿನಿಯರ್ ಎಂದು ಗುರುತಿಸಲಾಗಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆವಿ ಹಾಗೂ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮಲ್ಪೆ ಬೀಚ್ನಲ್ಲಿ ದುರಂತ | ಟೂರಿಸ್ಟ್ ಬೋಟ್ ಮಗುಚಿ ಬಿದ್ದು ಇಬ್ಬರು ಸಾವು.. ಹಲವರು ಅಸ್ವಸ್ಥ!



















