ಉತ್ತರ ಕನ್ನಡ : ಗೋಕರ್ಣದ ಕಡಲತೀರದಲ್ಲಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್‌ಗಳು ಸಮಯಕ್ಕೆ ಸರಿಯಾಗಿ ರಕ್ಷಿಸಿದ್ದಾರೆ. ಚಿತ್ರದುರ್ಗ ಮೂಲದ ಈ ಮೂವರು ಪ್ರವಾಸಿಗರು ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ತೀವ್ರತೆಗೆ ಸಿಲುಕಿ ಅಪಾಯಕ್ಕೆ ಒಳಗಾಗಿದ್ದರು.
ಘಟನೆ ತಿಳಿಯುತ್ತಿದ್ದಂತೆಯೇ ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್‌ಗಳು ತಕ್ಷಣ ಕಾರ್ಯಾಚರಣೆ ನಡೆಸಿ ಮೂವರನ್ನೂ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಲೈಫ್ ಗಾರ್ಡ್‌ಗಳ ತ್ವರಿತ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದ್ದು, ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ



















