ಬೆಂಗಳೂರು | ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಧಮ್ಕಿ ಹಾಕಿದ ಆರೋಪ ಪ್ರಕರಣದಲ್ಲಿ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ.
ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ.
ಇಂದು ಬೆಳಗ್ಗೆ ಅಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದಾನೆ ಎನ್ನುವ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಸಹ ಅಲರ್ಟ್ ಆಗಿದ್ದರು. ಆದ್ರೆ, ಪೊಲೀಸರು ಬಂಧನಕ್ಕೆ ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಾಜೀವ್ ಗೌಡ ಮಂಗಳೂರಿನಿಂದ ಎಸ್ಕೇಪ್ ಆಗಿದ್ದ. ಶತಾಯಗತಾಯ ರಾಜೀವ್ ಗೌಡನ ಬಂಧನಕ್ಕೆ ಪೊಲೀಸರು ಪಂಜರ ಹೆಣೆದು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ.
ಇದನ್ನೂ ಓದಿ : ಉಡುಪಿ | ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್‌ಗೆ ಟೋಲ್ ಗೇಟ್‌ನಲ್ಲಿ ಅವಮಾನ ಪ್ರಕರಣ – ಕ್ಷಮೆ ಕೇಳಿದ ಸಿಬ್ಬಂದಿ



















