ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಬಳಿಕ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಹೊಸಪೇಟೆಯಿಂದ ಗೋವಾ ಕಡೆ ಪ್ರವಾಸಕ್ಕೆ ಹೊರಟಿದ್ದ ಟಿಟಿ ವಾಹನದಲ್ಲಿ ಒಟ್ಟು 15 ಜನ ಪ್ರಯಾಣಿಸುತ್ತಿದ್ದು, ಅಪಘಾತದಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ಸಂಭವಿಸಿದ ವೇಳೆ ಪ್ರಯಾಣಿಕರ ತಂಗುದಾಣದಲ್ಲಿ ಯಾರೂ ಇರದಿರುವುದು ಮತ್ತೊಂದು ದೊಡ್ಡ ಅನಾಹುತ ತಪ್ಪಿದಂತೆ ಮಾಡಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ | ಲಾಂಗ್ ಹಿಡಿದು ಯುವಕನ ಹುಚ್ಚಾಟ ; ಓರ್ವನಿಗೆ ಗಾಯ



















