ಯಾದಗಿರಿ : ಆಕಸ್ಮಿಕ ಬೆಂಕಿ ಹತ್ತಿ ಧಗಧಗನೆ ಪ್ಲಾಸ್ಟಿಕ್ ಪೈಪ್‌ಗಳು ಹೊತ್ತಿ ಉರಿದಿರುವ ಘಟನೆ ಯಾದಗಿರಿಯ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ.
ಸದಾಶಿವ ರೆಡ್ಡಿ ಅವರಿಗೆ ಸೇರಿದ ಪೈಪ್‌ಗಳಾಗಿದ್ದು, ಬೆಂಕಿಯ ತೀವ್ರತೆಗೆ ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿ, ಕ್ಷಣಾರ್ಧದಲ್ಲಿ ಲಕ್ಷಗಟ್ಟಲೆ ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದಾವಿಸಿ ಬೆಂಕಿ ನಂದಿಸಲು ಮುಂದಾಗಿದ್ದು, ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಹುಚ್ಚುನಾಯಿ ಡೆಡ್ಲಿ ಅಟ್ಯಾಕ್ | 15ಕ್ಕೂ ಅಧಿಕ ಮಂದಿಗೆ ಗಾಯ



















