ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಸಮೀಪ ಸಿನಿಮೀಯ ಶೈಲಿಯ ಕಿಡ್ನಾಪ್ ಯತ್ನ ನಡೆದಿದೆ ಎಂಬ ಆರೋಪದ ಬಗ್ಗೆ ಅಡಿಷನಲ್ ಎಸ್‌ಪಿ ನಾಗರಾಜ್ ಪ್ರತಿಕ್ರಿಯೆ ನೀಡಿತ್ತಾ, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬಳಿಕವೇ ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಇಂಡ್ಲವಾಡಿ ಕ್ರಾಸ್ ಬಳಿ ಸ್ವಿಫ್ಟ್ ಕಾರು ಹಾಗೂ ಎರಡು ಬೈಕ್‌ಗಳಲ್ಲಿ ಬಂದ ಕೆಲವರು ಯುವಕನನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಈ ಸಂಬಂಧ ಯಾರೂ ಠಾಣೆಗೆ ಬಂದು ದೂರು ನೀಡಿಲ್ಲ ಎಂದು ಅಡಿಷನಲ್ ಎಸ್‌ಪಿ ಸ್ಪಷ್ಟಪಡಿಸಿದ್ದಾರೆ. ಘಟನೆಯ ಕುರಿತು ಆನೇಕಲ್ ಪೊಲೀಸರಿಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ತನಿಖೆಯಲ್ಲಿ ತಿಳಿದು ಬರಲಿದ್ದು, ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಾಗರಾಜ್ ಹೇಳಿದ್ದಾರೆ.
ಇದನ್ನೂ ಓದಿ : ವಿದೇಶಿಗರಿಗೆ ಮನೆ ಬಾಡಿಗೆ ನೀಡದಂತೆ ಪೊಲೀಸರ ಖಡಕ್ ಎಚ್ಚರಿಕೆ! ಕಾರಣವೇನು ಗೊತ್ತಾ?



















