ಕಾರವಾರ : ಡೆಸರ್ಟಿನೊ ಕೆಫೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಷ್ಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಈ ದುರಂತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಧಗಧಗಿಸಿದ್ದನ್ನು ಕಂಡು ಗ್ರಾಹಕರು ಮತ್ತು ಕಾರ್ಮಿಕರು ಕಂಗಲಾಗಿದ್ದು, ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.
ಘಟನಾ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಗೆ ಕಾರಣವೇನೆಂಬುದು ಮುಂದಿನ ತನಿಖೆಯಲ್ಲಿ ತಿಳಿಯಬೇಕಾಗಿದೆ.
ಇದನ್ನೂ ಓದಿ : ಯಾದಗಿರಿ | ಆಕಸ್ಮಿಕವಾಗಿ ಧಗಧಗಿಸಿದ ಪ್ಲಾಸ್ಟಿಕ್ ಪೈಪ್ಸ್ ; ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ



















