ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆಯಲ್ಲಿ ಖಾಲಿ ಇರುವ 28,740 ಹುದ್ದೆಗಳ ನೇಮಕಾತಿಗಾಗಿ ಕೊನೆಗೂ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಸೇರಿ ದೇಶಾದ್ಯಂತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯು (India Post GDS Recruitment 2026) ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ಡಾಕ್ ಸೇವಕ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಹುದ್ದೆಯನ್ನು ಪಡೆಯಬಹುದಾಗಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಭಾರತೀಯ ಅಂಚೆ
ಒಟ್ಟು ಹುದ್ದೆ: 28,740
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ ಇತ್ಯಾದಿ
ಒಟ್ಟು 28,740 ಸಾವಿರ ಹುದ್ದೆಗಳಲ್ಲಿ ಪೋಸ್ಟ್ ಮಾಸ್ಟರ್, ಸಹಾಯಕ ಪೋಸ್ಟ್ ಮಾಸ್ಟರ್ ಮತ್ತು ಡಾಕ್ ಸೇವಕ್ ಹುದ್ದೆಗಳು ಸೇರಿವೆ. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಮತ್ತು ಆಯ್ಕೆಯು ಮೆರಿಟ್ ಆಧಾರದ ಮೇಲೆ ನಡೆಯುತ್ತದೆ. ಜನವರಿ 31ರಿಂದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನವಾಗಿದೆ.
ಗ್ರಾಮೀಣ ಡಾಕ್ ಸೇವಕ್ (GDS), ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಅನ್ವಯ ನಡೆಯುವುದಿಲ್ಲ. 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 24,470 ರೂಪಾಯಿ ಸಂಬಳ ನೀಡಲಾಗುತ್ತದೆ.
ಭಾರತೀಯ ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಇದು ಕೇಂದ್ರ ಸರ್ಕಾರಿ ನೌಕರಿಯಾಗಿರುತ್ತದೆ. ಗ್ರಾಮೀಣ ಭಾಗದ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapostgdsonline.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ವಿದೇಶಿ ಶಿಕ್ಷಣಕ್ಕಾಗಿ ಭಾರತದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸ್ಕಾಲರ್ ಶಿಪ್ | ಹೀಗೆ ಅರ್ಜಿ ಸಲ್ಲಿಸಿ



















