ದಾವಣಗೆರೆ : ಹೊನ್ನಾಳಿ ಪಟ್ಟಣದಲ್ಲಿ ಮಂಡಲ ಬಿಜೆಪಿ ವತಿಯಿಂದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ನಡೆಸಲಾಯಿತು.

ರಾಜ್ಯಪಾಲರಿಗೆ ವಿಧಾನಸಭೆಯಲ್ಲಿ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ, ನಂತರ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನೆಯ ವೇಳೆ ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಅಬಕಾರಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : BMTC ಬಸ್‌ಗಳಲ್ಲಿ ಹಾಕಿದ್ದ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಕಿತ್ತೆಸೆದು ‘ಯುವ ಕರ್ನಾಟಕ ಸಂಘಟನೆ’ ಹೋರಾಟ



















