ಮುಂಬೈ : ವಿಮಾನ ದುರಂತದಲ್ಲಿ ನಿಧನರಾದ ಮಹಾರಾಷ್ಟ್ರದ ಪ್ರಭಾವಿ ನಾಯಕ, ‘ದಾದಾ’ ಎಂದೇ ಖ್ಯಾತರಾಗಿದ್ದ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿದ್ದು, ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯ ಸಂಸ್ಕಾರದ ವೇಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಕಣ್ಣೀರಿಟ್ಟಿರು. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಗಲಿದ ತಮ್ಮ ಪ್ರೀತಿಯ ʻದಾದʼನಿಗೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ (ಗಡಿಮಾ) ನಿಂದ 11 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಮೆರವಣಿ ಮಾಡಲಾಯಿತು. ಬಳಿಕ ಬಾರಾಮತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಪೂರ್ಣಗೊಂಡ ‘ದಾದಾ’ ಕನಸುಗಳು
ಅಜಿತ್ ಪವಾರ್ ಅವರ ಹಠಾತ್ ನಿಧನವು ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರು ಮುಖ್ಯವಾಗಿ ಬಾರಾಮತಿ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಹಲವು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸಿದ್ದರು. ವಿಶೇಷವಾಗಿ ಮಹಿಳೆಯರಿಗೆ ನೀಡುವ ಮಾಸಿಕ ಭತ್ಯೆಯನ್ನು 1,500 ರೂ.ಗಳಿಂದ 2,100 ರೂ.ಗಳಿಗೆ ಏರಿಸುವ ಪ್ರಸ್ತಾವನೆ ಹಾಗೂ ಪುಣೆ-ನಾಸಿಕ್ ಹೈಸ್ಪೀಡ್ ರೈಲು ಸಂಪರ್ಕದಂತಹ ಕನಸಿನ ಯೋಜನೆಗಳು ಈಗ ಅರ್ಧಕ್ಕೆ ನಿಂತಂತಾಗಿವೆ. ಅವರ ಎನ್‌ಸಿಪಿ ಬಣದ ಮುಂದಿನ ನಾಯಕತ್ವ ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಕರ್ಮಭೂಮಿ ಬಾರಾಮತಿಯಲ್ಲಿ ಅಜಿತ್ ದಾದಾಗೆ ಸಾವಿರಾರು ನಾಯಕರು, ಬೆಂಬಲಿಗರಿಂದ ಕಣ್ಣೀರ ವಿದಾಯ



















