ಬೆಂಗಳೂರು : ಕರ್ನಾಟಕ ಪೊಲೀಸರಿಗೆ ಇನ್ಮುಂದೆ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಸಿಗಲಿದ್ದು, ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ.
ಹೌದು.. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ. ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ ಎಂದು ಎಲ್ಲಾ ಘಟಕಾಧಿಕಾರಿಗಳಿಗೆ DG-IGP ಡಾ. ಎಂ.ಎ.ಸಲೀಂ ಅವರು ನಿರ್ದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬಂದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಯಾರಿಗೆಲ್ಲ ಈ ರಜೆ ಸಿಗಲಿದೆ?
ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ನಿರ್ಧಾರಕ್ಕೆ ಚಾಲನೆ ಸಿಕ್ಕಿದೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI), ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.
ಇದನ್ನೂ ಓದಿ : ನಾನು ರಾಜ್ ಬಿ ಶೆಟ್ಟಿಯ ಬಿಗ್ ಫ್ಯಾನ್ | ಕಿಚ್ಚ ಸುದೀಪ್



















