ಬೆಂಗಳೂರು : ದೇಶದಲ್ಲೇ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ಖಾಲಿ ಇರುವ 2,273 ಹುದ್ದೆಗಳ ನೇಮಕಾತಿಗಾಗಿ (SBI Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,273 ಸರ್ಕಲ್ ಬೇಸ್ಡ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 2,273
ಹುದ್ದೆಗಳ ಹೆಸರು: ಸರ್ಕಲ್ ಬೇಸ್ಡ್ ಆಫೀಸರ್ಸ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 18
ಕರ್ನಾಟಕದಲ್ಲೂ 200 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 9.5 ಲಕ್ಷ ರೂಪಾಯಿವರೆಗೆ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿಗಳ ಪರಿಶೀಲನೆ, ಆನ್ ಲೈನ್ ಟೆಸ್ಟ್, ದಾಖಲೆ ಪರಿಶೀಲನೆ, ಸಂದರ್ಶನ ಹಾಗೂ ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು sbi.co.inಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!



















