ಬೆಳಗಾವಿ : ಬೆಳಗಾವಿ ನಗರದಲ್ಲಿ ಶನಿವಾರ ಕೂಟ್ ಬಳಿ ಇರುವ ಮಹಿಳಾ ಅಘಡಿ ಹೊಟೇಲ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಅಡುಗೆಮನೆಯಲ್ಲಿ ಬೆಂಕಿ ಹತ್ತುತ್ತಿದ್ದಂತೆ ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡು ಒಳಗಡೆ ಇದ್ದ ಸಿಲಿಂಡರ್‌ಗಳನ್ನು ಹೊರಗೆ ತೆಗೆದಿದ್ದಾರೆ. ಒಟ್ಟು 7 ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸುರಕ್ಷಿತವಾಗಿ ಹೊರತಂದ ಪರಿಣಾಮ ಭಾರೀ ಅನಾಹುತ ತಪ್ಪಿದೆ.
ರೇಣು ಕಿಲ್ಲೇಖರ್ ಅವರ ಒಡೆತನದ ಈ ಹೊಟೇಲ್‌ನಲ್ಲಿ ಸಂಭವಿಸಿದ ಬೆಂಕಿ ಬಗ್ಗೆ ಮಾಹಿತಿ ಪಡೆದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಈ ಘಟನೆ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿಗೆ ನಿಖರ ಕಾರಣ ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪ್ರಕರಣ ಸಂಬಂಧ ಪರಿಶೀಲನೆ ನಡೆಯುತ್ತಿದೆ.
ಇದನ್ನೂ ಓದಿ : ಚಿಕ್ಕಮಗಳೂರು | ಹಿಂದು ಸಮಾಜೋತ್ಸವದ ಬ್ಯಾನರ್ ಹರಿದ ಕಿಡಿಗೇಡಿಗಳು



















