ಹಾವೇರಿ : ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ಅಕ್ರಮ ಜೂಜು ಅಡ್ಡೆಗಳು ತಲೆಎತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಜಾತ್ರೆ ಆವರಣದಲ್ಲಿ ಬಾಲ್ ಬಾಕ್ಸ್, ಗುಳಗುಳಿ ಚಕ್ರ ಸೇರಿದಂತೆ ಜೂಜಾಟದ ಅಡ್ಡೆಗಳು ಬಹಿರಂಗವಾಗಿ ಕಾರ್ಯನಿರ್ವಹಿಸುತ್ತಿವೆ. 10, 20, 50 ರೂಪಾಯಿ ಹಾಕಿದರೆ ಹೆಚ್ಚು ಹಣ ಗೆಲ್ಲುವ ಆಮಿಷವೊಡ್ಡಿ ಜನರನ್ನು ಸೆಳೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಅಕ್ರಮ ಜೂಜಾಟ ದೇವಸ್ಥಾನದ ಆಡಳಿತ ಮಂಡಳಿಯ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂಬ ಗಂಭೀರ ಆರೋಪವೂ ಕೇಳಿಬರುತ್ತಿದೆ. ಜೂಜಾಟದಿಂದ ಅನೇಕ ಜನರು ಸಾವಿರಾರು ರೂಪಾಯಿ ಕಳೆದುಕೊಳ್ಳುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸರ ಗಮನಕ್ಕೆ ಬಂದರೂ ಕೂಡ ಡೋಂಟ್ ಕೇರ್ ಧೋರಣೆ ತಾಳಿರುವುದು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಅಕ್ರಮ ಜೂಜಾಟದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಇದನ್ನೂ ಓದಿ : ಬೆಳಗಾವಿ | ಆಕಸ್ಮಿಕವಾಗಿ ಹೊತ್ತಿ ಉರಿದ ಹೊಟೇಲ್ ; ತಪ್ಪಿದ ಭಾರೀ ಅನಾಹುತ



















