ಬೀದರ್: ಬೆಳ್ಳಂಬೆಳಿಗ್ಗೆ ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.
ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಸ್‌ಪಿ ಪ್ರದೀಪ್ ಗುಂಟಿ ತೆರಳಿದ್ದಾರೆ.
ಸೋಕೋ ತಂಡ ಸ್ಪೋಟದ ವಸ್ತುಗಳ ಮಾದರಿ ಸಂಗ್ರಹಿಸಲಿದ್ದಾರೆ. 6 ತಿಂಗಳಲ್ಲಿ 5 ಬಾರಿ ಈ ರೀತಿಯ ನಿಗೂಢ ಸ್ಪೋಟವಾಗಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.
ಇದನ್ನೂ ಓದಿ:ಹೊಸಕೋಟೆ | ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!



















