ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ (SIT) ರಚನೆ ಮಾಡಲಾಗಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ.
ಜಂಟಿ ಆಯುಕ್ತ ವಂಶಿಕೃಷ್ಣ ಎಸ್‌ಐಟಿ ನೇತೃತ್ವ ವಹಿಸಲಿದ್ದಾರೆ. ತಂಡದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್‌ಬಿ ಎಸಿಪಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್ಪೆಕ್ಟರ್ ರವಿ ಇದ್ದಾರೆ.
ಹಿನ್ನೆಲೆ |
ಜ. 30ರಂದು ಮಧ್ಯಾಹ್ನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ ಸಮಯದಲ್ಲಿ ಸಿ.ಜೆ. ರಾಯ್ ಅವರು ಬೆಂಗಳೂಡಿನ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಎಸ್ಐಟಿ ಮೂಲಕ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ಇದನ್ನೂ ಓದಿ : ಸಿ.ಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ, ಬೇರೆ ಯಾರಾದ್ರೂ ಶೂಟ್ ಮಾಡಿದ್ರಾ? | ಪ್ರದೀಪ್ ಈಶ್ವರ್ ಅನುಮಾನ!


















