ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 8
ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 31 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ energystorage@jncasr.ac.in@jncasr.ac.in ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕಾಡುವುದಿಲ್ಲ “ಚಿಲ್ಲರೆ’’ ಸಮಸ್ಯೆ | ಎಟಿಎಂಗಳಲ್ಲೂ ಸಿಗಲಿವೆ 10, 20, 50 ರೂ. ನೋಟುಗಳು



















