ಬೀದರ್ : ಜಿಲ್ಲೆಯ ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಗಾಯಗೊಂಡ ಮಕ್ಕಳನ್ನು ಭೇಟಿ ಮಾಡಿ ಸಚಿವ ಈಶ್ವರ್ ಖಂಡ್ರೆ ಅವರು ಆರೋಗ್ಯ ವಿಚಾರಿಸಿದ್ದಾರೆ.
ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ, ರಹೀಂಖಾನ್ ಮತ್ತು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಗಾಯಾಳು ಮಕ್ಕಳ ಕುಟುಂಬಕ್ಕೆ ಇಬ್ಬರು ಸಚಿವರು ತಲಾ 25 ಸಾವಿರ ರೂ. ಧನಸಹಾಯ ಮಾಡಿದ್ದು, ಯಾವುದೇ ಆತಂಕ ಪಡಬೇಡಿ ಎಂದು ತಿಳಿಸಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರ್ ಖಂಡ್ರೆ ಅವರು, ಮೋಳಕೇರಾದಲ್ಲಿ ಸ್ಫೋಟಗೊಂಡಿದ್ದು ಬಹಳ ನೋವಿನ ಸಂಗತಿ. 4 ಮಕ್ಕಳು, ಇಬ್ಬರು ವಯಸ್ಕರು ಗಾಯಗೊಂಡಿದ್ದು, ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಘಟನೆಯ ಬಗ್ಗೆ ಪೊಲೀಸರು ಆಳವಾಗಿ ತನಿಖೆ ನಡೆಸುತ್ತಿದ್ದು, ಸರ್ಕಾರ ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳಿಗೆ ಘಟನೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದೆ. ಸ್ಫೋಟಕ್ಕೆ ಕಾರಣವೇನು? ಇದರ ಹಿಂದೆ ಯಾರಿದ್ದಾರೆ? ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಆರೋಪಿಗಳನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದು, ತನಿಖಾ ವರದಿ ಬಂದ್ಮೇಲೆ ಎಲ್ಲವನ್ನೂ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : Union Budget 2026 | ಕರ್ನಾಟಕ ಸೇರಿ ದೇಶದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್



















