ನವದೆಹಲಿ: ಕೇಂದ್ರ ಹಾಗೂ ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ಸಂಘರ್ಷ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಗುಡ್ ನ್ಯೂಸ್ ನೀಡಿದೆ. ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆಗಾಗಿ ರಚಿಸಲಾಗಿದ್ದ 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. ಶಿಫಾರಸುಗಳ ಜಾರಿಗಾಗಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
16ನೇ ಹಣಕಾಸು ಆಯೋಗದ ಶಿಫಾರಸುಗಳ ಅನ್ವಯ ಕೇಂದ್ರ ಸರ್ಕಾರವು ರಾಜ್ಯಗಳಿಗೆ 2026-27ನೇ ಹಣಕಾಸು ವರ್ಷದಲ್ಲಿ ಶೇ.41ರಷ್ಟು ಪಾಲು ನೀಡಲಿದೆ. ಮುಂದಿನ ಒಂದು ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾಲು ಹಂಚಿಕೆಗೆ ಆಗ್ರಹಿಸಿತ್ತು. 16ನೇ ಹಣಕಾಸು ಆಯೋಗದ ಅನ್ವಯ ರಾಜ್ಯಕ್ಕೆ ಸಿಗಬೇಕಾದ ನ್ಯಾಯಯುತ ಪಾಲು ನೀಡಬೇಕು ಎಂದು ಸರ್ಕಾರ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಆಯೋಗದ ಶಿಫಾರಸುಗಳಿಗೆ ಅನುಮೋದನೆ ನೀಡಿದ ಕಾರಣ ಕರ್ನಾಟಕಕ್ಕೆ ಹೆಚ್ಚಿನ ತೆರಿಗೆ ಪಾಲು ಸಿಗಲಿದೆ ಎಂದು ತಿಳಿದುಬಂದಿದೆ.
ಪ್ರಮುಖ ತೀರ್ಮಾನಗಳು
ಜಾಮ್ ನಗರದಲ್ಲಿ ಡಬ್ಲ್ಯೂಎಚ್ಒ ಕೇಂದ್ರ ಸ್ಥಾಪನೆಗೆ ನಿರ್ಧಾರ
16ನೇ ಹಣಕಾಸು ಆಯೋಗದ ಶಿಫಾರಸುಗಳಿಗೆ ಅನುಮೋದನೆ
ಇದರ ಅನ್ವಯ ರಾಜ್ಯಗಳಿಗೆ ಶೇ.41ರಷ್ಟು ಪಾಲು ನೀಡಲು ತೀರ್ಮಾನ
1.4 ಲಕ್ಷ ಕೋಟಿ ರೂಪಾಯಿ ರಾಜ್ಯಗಳಿಗೆ ಹಂಚಿಕೆ
ತೆರಿಗೆ ಬಾಕಿ ಉಳಿಸಿಕೊಳ್ಳುವವರಿಗೆ ಶೇ.100ರಷ್ಟು ದಂಡದ ಎಚ್ಚರಿಕೆ
ಇದನ್ನೂ ಓದಿ: Union Budget 2026 | ಕರ್ನಾಟಕ ಸೇರಿ ದೇಶದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್


















