ಕಲಬುರಗಿ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಕೇಂದ್ರ ಬಜೆಟ್‌ನಲ್ಲಿ (ಏನೂ ಕೊಟ್ಟಿಲ್ಲ. ನಮ್ಮ ರಾಜ್ಯಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಈ ಮೂಲಕ ರಾಜ್ಯಕ್ಕೆ ದೊಡ್ಡ ಅನ್ಯಾಯ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈ ಸ್ಪೀಡ್ ರೈಲು ಕೊಟ್ಟಿದ್ದಾರೆ. ಅದು ಸಹ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ಅಪ್ಪರ್ ಕೃಷ್ಣಾ ಹಾಗೂ ಅಪ್ಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ದರೂ ಏನೂ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ಬಜೆಟ್‌ನಲ್ಲಿ ಯೋಜನೆಗೆ 5,200 ಕೋಟಿ ಹಣ ಕೊಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ಕೊಟ್ಟಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್‌ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೇಳೆ ಕಾಳುಗಳಿಗೆ ಸಹಾಯ ಮಾಡಿ ಅಂತ ಕೇಳಿದರೂ ಅದು ಸಹ ಮಾಡಿಲ್ಲ. 15ನೇ ಹಣಕಾಸು ಆಯೋಗ ಆರಂಭವಾಗಿದೆ. ತೆರಿಗೆ ಆದಾಯದಲ್ಲಿ ನಾವು ಕನಿಷ್ಠ ಶೇ.50 ಕೊಡಿ ಅಂತ ಕೇಳಿದ್ದೆವು. ಆದರೆ, ಶೇ.41 ಮಾತ್ರ ಕೊಟ್ಟಿದ್ದಾರೆ. 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71 ಮಾತ್ರ. 14ನೇ ಹಣಕಾಸಿಗಿಂತ ಜಾಸ್ತಿ ಮಾಡಿ ಕೊಡಿ ಎಂದರೆ 4.131 ಮಾತ್ರ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ 14ನೇ ಹಣಕಾಸಿನಷ್ಟು ಸಹ ಹಣ ನೀಡಿಲ್ಲ. ಉತ್ತರ ಪ್ರದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹಣಕಾಸಿನ ಹಂಚಿಕೆಯಲ್ಲಿ ಭಾರಿ ತಾರತಮ್ಯವಾಗಿ ನಮಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಏರ್ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ
ಇದನ್ನೂ ಓದಿ : ಏರ್ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ



















