ಬೆಂಗಳೂರು: ನಗರದಲ್ಲಿ ಕಾರು ಚಾಲಕನ ಅಜಾಗರೂಕ ಮತ್ತು ವೇಗದ ಚಾಲನೆಯಿಂದ ದೊಡ್ಡ ಅಪಘಾತ ನಡೆದ ಘಟನೆ ಕಳೆದ ರಾತ್ರಿ ನಡೆದಿದೆ. ಬೆಳ್ಳಂದೂರು ಔಟರ್ ರಿಂಗ್ ರಸ್ತೆಯಲ್ಲಿ ಯರ್ರಾಬಿರ್ರಿಯಾಗಿ ಕಾರು ಚಲಾಯಿಸಿದ ಚಾಲಕ, ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆಯಲ್ಲಿ ಪಾರಾಗಿದ್ದು, ಕ್ಷಣಮಾತ್ರದಲ್ಲಿ ಭಾರೀ ಅನಾಹುತ ತಪ್ಪಿದೆ. ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಕಾರಣ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಸಂಪೂರ್ಣ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ರ್ಯಾಷ್ ಡ್ರೈವಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬರುತ್ತಿದೆ.
ಇದನ್ನೂ ಓದಿ : ಮನೆ ಮುಂದೆ ಗಾಡಿ ನಿಲ್ಲಿಸುವ ವಿಚಾರಕ್ಕೆ ಗಲಾಟೆ | ಕೊ*ಯಲ್ಲಿ ಅಂತ್ಯ


















