ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವೊಲ್ಯೂಷನ್ ಪ್ರಾಧಿಕಾರದಲ್ಲಿ (KMEA Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 7 ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವೊಲ್ಯೂಷನ್ ಪ್ರಾಧಿಕಾರ (KMEA)
ಒಟ್ಟು ಹುದ್ದೆಗಳು: 7
ಹುದ್ದೆಗಳ ಹೆಸರು: ರಿಸರ್ಚ್ ಫೆಲೋ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 16
ಕರ್ನಾಟಕದ ಬೆಂಗಳೂರಿನಲ್ಲೇ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸುವ ಮೂಲಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kmea.karnataka.gov.in ಭೇಟಿ ನೀಡಿ ಅಧಿಸೂಚನೆ ಸೇರಿ ವಿವಿಧ ಮಾಹಿತಿ ಪಡೆಯಬಹುದು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Karnataka Monitoring and Evaluation Authority, 5th Floor, 2nd Stage, Multi Story Building, Bangalore
ಇದನ್ನೂ ಓದಿ : 90ರ ಹರೆಯದಲ್ಲಿ ದಲೈ ಲಾಮಾಗೆ ಒಲಿದ ‘ಗ್ರ್ಯಾಮಿ’ ಗೌರವ | ಆಧ್ಯಾತ್ಮಿಕ ಲೋಕದ ಧ್ವನಿಗೆ ಜಾಗತಿಕ ಮನ್ನಣೆ!



















