ಬೆಂಗಳೂರು : HLL ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 5
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ದೇಶದ ಹಲವೆಡೆ
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 11
ಮಹಾರಾಷ್ಟ್ರದ ಮುಂಬೈ, ಕೇರಳದ ತಿರುವನಂತಪುರಂ, ಅಸ್ಸಾಂನ ಗುವಾಹಟಿ, ದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿಯೇ ಮಾಸಿಕ 45 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಸಾವು ಪ್ರಕರಣ | ಸಮಗ್ರ ತನಿಖೆಗೆ ಆದೇಶ!



















