ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 1200 ಎಂಎಂ, 900 ಎಂಎಂ ಹಾಗೂ 700 ಎಂಎಂ ವ್ಯಾಸದ ನೀರು ಸರಬರಾಜು ಪೈಪ್‌ಲೈನ್‌ಗಳ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಹಾಗೂ ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 6 ಶುಕ್ರವಾರ ಬೆಳಿಗ್ಗೆ 6 ಗಂಟೆವರೆಗೆ, ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ.
ಈ ಅವಧಿಯಲ್ಲಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಕೋರಿದೆ.
ಯಾವ್ಯಾವ ಏರಿಯಾದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ?
ಬೆಂಗಳೂರು ನಗರದ ಮಾಗಡಿ ರಸ್ತೆ, ಕದ್ರೆನಹಳ್ಳಿ, ಗಂಗಾಧರ ನಗರ, ಪ್ರಗತಿಪುರ, ಪದ್ಮನಾಭ ನಗರ, ಆರ್.ಕೆ ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿ ನಗರ, ಮುನೇಶ್ವರ ನಗರ, ಬೇಂದ್ರೆನಗರ, ಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ, ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್ ನಗರ, ಇಸ್ರೋ ಬಡಾವಣೆ, ಟೀಚರ್ಸ್ ಕಾಲೋನಿ, ಯಲಚೇನಹಳ್ಳಿ, ಕನಕಪುರ ಮುಖ್ಯರಸ್ತೆ, ಇಲಿಯಾಸ್ ನಗರ, ಪೂರ್ಣ ಪ್ರಜ್ಞಾ ಬಡಾವಣೆ, ಮಿನಜ್ ನಗರ, ಉತ್ತರಹಳ್ಳಿ, ಕೆ.ಎಸ್.ಆರ್.ಟಿ.ಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ.
ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ, ಕೆನರಾ ಬ್ಯಾಂಕ್ ಕಾಲೋನಿ, ಕಾಕತೀಯ ನಗರ, ಸುದ್ದಗುಂಟೆಪಾಳ್ಯ, ಮಾರುತಿ ನಗರ, ಭವಾನಿ ಲೇಔಟ್, ವೆಂಟೇಶ್ವರ ಬಡಾವಣೆ, ಬೃಂದಾವನ ಲೇಔಟ್, ಮಡಿವಾಳ, ಚಿನ್ನಮ್ಮ ಲೇಔಟ್, ಕೋರಮಂಗಲ 2,4,5,6,7 ಮತ್ತು 8 ನೇ ಬ್ಲಾಕ್, ಚಿಕ್ಕಆಡುಗೋಡಿ, ಸೆಂಟ್ ಜಾನ್ ಆಸ್ಪತ್ರೆ, ರಾಜೇಂದ್ರ ನಗರ, ಆಡುಗೋಡಿ, ಜಾನ್ಸ್‌ನ್ ಮಾರ್ಕೆಟ್, ಸಿಎಲ್‌ಆರ್, ಶಾಂತಿನಗರ, ಲಾಗ್ ಪೋರ್ಡ್ ಟೌನ್, ಎಂಜಿ ರಸ್ತೆ, ರಿಚ್‌ಮಂಡ್ ಟೌನ್, ನೀಲಸಂದ್ರ, ಅಶೋಕ್ ನಗರ, ಆಸ್ಟಿನ್ ಟೌನ್, ವಿವೇಕ್ ನಗರ, ಈಜಿಪುರ, ದೊಮ್ಮಲೂರು ಲೇಔಟ್, ದೊಮ್ಮಲೂರು ವಿಲೇಜ್, ಕೋಡಿಹಳ್ಳಿ, ಕಮಾಂಡೋ ಆಸ್ಪತ್ರೆ, ಜೋಗಿಪಾಳ್ಯ, ಕೇಂಬ್ರಿಡ್ಜ್ ಲೇಔಟ್ ಚಾಮರಾಜಪೇಟೆ, ಶ್ರೀನಗರ ಬಿಎಸ್‌ಕೆ 1ನೇ ಹಂತ.
ಅಶೋಕ್ ನಗರ ಪೈಪ್ ಲೈನ್ ರಸ್ತೆ, ಜಯನಗರ 4ನೇ ಮತ್ತು ʼಟಿʼ ಬ್ಲಾಕ್, ತಿಲಕ್ ನಗರ, ಮಾಧವನ ಪಾರ್ಕ್ , ಹೊಂಬೇಗೌಡ ನಗರ, ಲಕ್ಕಸಂದ್ರ, ಶಾಂತಿನಗರ ಲೇಔಟ್, ಜೆಕೆಪುರ, ಅಕ್ಕಿತಿಮ್ಮನ ಹಳ್ಳಿ, ಜಗಜೀವನರಾಮನಗರ, ರುದ್ರಪ್ಪ ಗಾರ್ಡನ್, ವಾಲ್ಮೀಕಿ ನಗರ, ಮಾವಳ್ಳಿ, ಶಂಕರಪುರಂ, ಕೆಂಪೇಗೌಡನಗರ, ಸುಧಾಮನಗರ, ಬನಗಿರಿ, ಜಯನಗರ, 6,7 ಮತ್ತು 8ನೇ ಬ್ಲಾಕ್, ಯಡಿಯೂರು, ಇಟ್ಟಮಡು, ಎಸ್‌ಬಿಎಂ ಕಾಲೋನಿ, ಹೊಸಕೆರೆಹಳ್ಳಿ, ಐಟಿಐ ಲೇಔಟ್, ಶ್ರೀನಿವಾಸ ನಗರ, ಡಿಸೋಜಾ ನಗರ, ಕೆರೆಕೋಡಿ, ಮುನೇಶ್ವರ ನಗರ, ಜೆಪಿನಗರ 1, 2 ಮತ್ತು 3ನೇ ಹಂತ, ಮಾರೇನಹಳ್ಳಿ, ಜಯನಗರ 5 ಮತ್ತು 9ನೇ ಬ್ಲಾಕ್, ಭೈರಸಂದ್ರ, ಎಲ್ ಐ ಸಿ ಕಾಲೋನಿ, ಸಿದ್ದಾಪುರ, ವಿಲ್ಸ್‌ನ್ ಗಾರ್ಡನ್, ನಿಮಾನ್ಸ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ನಮ್ಮ ಗ್ರಾಮಕ್ಕೆ ಬಾರ್ ಬೇಡ | ಮೈಸೂರಿನ ಹೊಸರಾಮನಹಳ್ಳಿ ಗ್ರಾಮಸ್ಥರಿಂದ ಪಿಡಿಒಗೆ ಮನವಿ!



















