ಉಡುಪಿ | ಜಿಲ್ಲೆಯ ಹಿರಿಯಡ್ಕ ಪೇಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಇನ್ನೋವಾ ಕಾರೊಂದು ಎದುರಿಗೆ ತೆರಳುತ್ತಿದ್ದ ಸ್ಕೂಟರ್ಗೆ ಮೊದಲು ಡಿಕ್ಕಿಯಾಗಿ ಬಳಿಕ ಆಟೋಗೆ ಗುದ್ದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮತ್ತೊಂದು ಬೈಕ್ಗೆ ಡಿಕ್ಕಿಯಾಗಿದೆ. ಈ ವೇಳೆ ಸ್ಕೂಟರ್ ಸವಾರ ರಸ್ತೆಗೆ ಹಾರಿ ಬಿದ್ದಿದ್ದು, ಪವಾಡ ಸದೃಶ ರೀತಿಯಲ್ಲಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಪ್ರಧಾನಿ ಮೋದಿಗೆ ಅಪಮಾನ | ನಜೀರ್ ಅಹ್ಮದ್ ವಿರುದ್ದ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ!
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷ
ಬೆಂಗಳೂರು : ನಗರದ ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಇಂದು ಬೆಳಿಗ್ಗೆ 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಕಂಡು ಬಂದಿದೆ. ಚಿರತೆ ಪ್ರತ್ಯಕ್ಷವಾದುದು ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲಿ ಸಂಭವಿಸಿದ್ದು, ಸಿಸಿಟಿವಿ ಕ್ಯಾಮರಾ ಮೂಲಕ ದೃಶ್ಯ ದಾಖಲಾಗಿದೆ. ಇದರ ಪರಿಣಾಮವಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟಾಗಿದೆ. ಚಿರತೆ ಅರಣ್ಯ ಪ್ರದೇಶದಿಂದ ನಗರಕ್ಕೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ, ಸ್ಥಳೀಯ ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳವನ್ನು ಪರಿಶೀಲಿಸುತ್ತಿದ್ದು, ಚಿರತೆಯನ್ನು ಸುರಕ್ಷಿತವಾಗಿ ವಾಪಸು ಅರಣ್ಯಕ್ಕೆ ಕಳುಹಿಸುವ ಕ್ರಮ ಕೈಗೊಳ್ಳಲಾಗಿದೆ.



















