ಶಿವಮೊಗ್ಗ : ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಏಕಾಏಕಿ ಅಸ್ವಸ್ಥರಾಗಿದ್ದು, ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಗೋಡು ತಿಮ್ಮಪ್ಪ ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ.
ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ ಎಂದು ತಿಳಿದುಬಂದಿದೆ. ಆರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ‘ಲ್ಯಾಂಡ್‌ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ | ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!



















