ಬೆಂಗಳೂರು : ನೀವು ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 4 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಾಲ್ಕು ಸೀನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 4
ಹುದ್ದೆ ಹೆಸರು: ಸೀನಿಯರ್ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಸಂದರ್ಶನದ ದಿನಾಂಕ: ಫೆಬ್ರವರಿ 24
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿಟೆಕ್, ಎಂಇ, ಎಂ ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy General Manager (HR), Product Development & Innovation Centre (PDIC), Bharat Electronics Limited, Prof. U R Rao Road, Near Nagaland Circle, Jalahalli Post, Bengaluru – 560 013.
ಇದನ್ನೂ ಓದಿ : ಬೆಳಗಾವಿ | ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಹ*ತ್ಯೆಗೈದ ಯುವಕರು!



















