ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬನ್ನೇರುಘಟ್ಟ ಮುಖ್ಯರಸ್ತೆಯ ಕೊಪ್ಪ ಗೇಟ್ ಬಳಿ ರಾಕೆಟ್ ವೇಗದಲ್ಲಿ ಬಂದ ಕಾರುಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜಿಗಣಿ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳು, ಚಾಲಕನ ನಿಯಂತ್ರಣ ತಪ್ಪಿ ಮುಂಬದಿಯ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಡಿವೈಡರ್ ದಾಟಿ ಪಲ್ಟಿಯಾಗಿದ್ದರಿಂದ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸದ್ಯ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಓಲಾ-ಊಬರ್‌ಗೆ ಸೆಡ್ಡು | ಒಕ್ಕೂಟ ಮಾದರಿಯ ‘ಭಾರತ್ ಟ್ಯಾಕ್ಸಿ’ಗೆ ಇಂದು ಸಚಿವ ಅಮಿತ್ ಶಾ ಚಾಲನೆ!



















