ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT Recruitment 2026) ಖಾಲಿ ಇರುವ 117 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರೊಫೆಸರ್, ಡೆಪ್ಯೂಟಿ ಲೈಬ್ರೇರಿಯನ್ ಸೇರಿ 117 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)
ಖಾಲಿ ಹುದ್ದೆಗಳ ಸಂಖ್ಯೆ: 117
ಹುದ್ದೆಯ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಪ್ರೊಫೆಸರ್, ಡೆಪ್ಯೂಟಿ ಲೈಬ್ರೇರಿಯನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 20
ಕರ್ನಾಟಕದ ಮೈಸೂರು, ಬೆಂಗಳೂರು, ಒಡಿಶಾದ ಭುವನೇಶ್ವರ, ಮಧ್ಯಪ್ರದೇಶದ ಭೋಪಾಲ, ರಾಜಸ್ಥಾನದ ಅಜ್ಮೇರ್, ಮೇಘಾಲಯದ ಶಿಲ್ಲಾಂಗ್, ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ncert.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.44 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ.. ಹೇಳಿದ್ದೇನು?



















