ಮಂಗಳೂರು | ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಮುಂಭಾಗ ಈ ಘಟನೆ ನಡೆದಿದ್ದು, ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು.
ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಹಾರಿ ರಸ್ತೆಗೆ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ ಪಾರಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಚಿತ್ರರಂಗವನ್ನು ಮತ್ತೆ ಬೆಚ್ಚಿಬೀಳಿಸಿದ ಡ್ರಗ್ಸ್ ಕೇಸ್ | ಖ್ಯಾತ ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ



















