ಬೆಂಗಳೂರು | ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳು ಕಿಲ್ಲರ್ ಬಸ್ಗಳೆಂದೇ ಕುಖ್ಯಾತಿ ಪಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಸ್ ಅಪಘಾತದ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿಗೆ BMTC ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ಆಕೆಯ ಮೇಲೆ ಹರಿದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರು ಘಟನೆ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ.
ಮಣಿಪುರ ಮೂಲದ ಹನ್ನಾ ಇನಕಾ ಸಾವನ್ನಪ್ಪಿದ ಯುವತಿ. ಟಿನ್ ಫ್ಯಾಕ್ಟರಿ ಬಳಿ ಈ ದುರ್ಘಟನೆ ನಡೆದಿದೆ. ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಯುವತಿ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರಕ್ಕೆ ಸಿಲುಕಿದ್ದಾರೆ. ನಿನ್ನೆ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಣಿಪುರ ಮೂಲದ ಈ ಯುವತಿ ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ರು. ಈ ಸಂಬಂಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಗರ್ಭ ಧರಿಸಿದ ಬೆಕ್ಕು ಅಪಹರಿಸಿದ ಆರೋಪ.. ಅಪಾರ್ಟ್‌ಮೆಂಟ್ ಪ್ರೆಸಿಡಂಟ್ ವಿರುದ್ಧ ಕ್ಯಾಟ್ ಓನರ್ ಕಂಪ್ಲೇಂಟ್!



















