ಬೆಂಗಳೂರು: ಅವಧಿ ಪೂರ್ಣಗೊಂಡಿರುವ ವಿವಿಧ 54 ನಿಗಮ-ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಪದಾವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯ್, ದೇವರಾಜ ಅರಸು ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್, ಒಕ್ಕಲಿಗ ನಿಗಮ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿ ರಾವ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಪಿ. ಸುಜ್ಞಾನ ಮೂರ್ತಿ ಸೇರಿದಂತೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಿ, ಅವರಿಗೆ ನೀಡಲಾಗುತ್ತಿದ್ದ ರಾಜ್ಯ ಸಚಿವರ ಸ್ಥಾನಮಾನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಅಪ್ಪಾಜಿ ನಾಡಗೌಡ, ರಾಜು ಕಾಗೆ, ಎಚ್.ಸಿ. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ, ಟಿ.ಡಿ. ರಾಜೇಗೌಡ, ಶರತ್ ಬಚ್ಚೇಗೌಡ ಸೇರಿ ಅವಧಿ ಪೂರ್ಣಗೊಂಡಿದ್ದ ವಿವಿಧ 25 ನಿಗಮ ಮಂಡಳಿಗಳ ಅಧ್ಯಕ್ಷರ ಪದಾವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ | ಪೂಜೆಗೆ ತೆರಳಿದ ಬಿಜೆಪಿ ಮುಖಂಡರನ್ನು ತಡೆದು ನಿಲ್ಲಿಸಿದ ಪೊಲೀಸರು



















