ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 46 ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟ್ಯಾಕ್ಸ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Income Tax Department Recruitment 2026) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು: ಟ್ಯಾಕ್ಸ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 46
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 10
ಗುಜರಾತ್ ನಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿ ಸಲ್ಲಿಸಬಹುದು. ಟ್ಯಾಕ್ಸ್ ಅಸಿಸ್ಟಂಟ್, ಮಲ್ಟಿಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಹಾಗೂ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 81 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ incometaxmumbai.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ



















