ಬೆಳಗಾವಿ : ಬರ್ತಡೇ ದಿನವೇ ಸಹಚರರ ಜೊತೆ ಥಾರ್ ಹಾಗೂ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಿದ್ದ ರೌಡಿಶೀಟರ್ ಸೇರಿ ಏಳು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಲ್ಕು ಸೀಟರ್ ಥಾರ್ ವಾಹನದಲ್ಲಿ ಹತ್ತು–ಹದಿನೈದು ಯುವಕರು ಹತ್ತಿಕೊಂಡು ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡಿದ್ದು, ಅದಕ್ಕೆ ತಕ್ಕಂತೆ ಹಾಡು ಹಾಕಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದು, ರೌಡಿಶೀಟರ್ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ರೌಡಿಶೀಟರ್ ಸುರೇಶ್ ಭಜಂತ್ರಿ ಸೇರಿದಂತೆ ಜಗದೀಶ್ ಭಜಂತ್ರಿ, ಮಂಜುನಾಥ ನಡಮನಿ, ವಿನಾಯಕ ಚಿಕ್ಕಲದಿನ್ನಿ,
ರವಿ ದಾದಪ್ಪನವರ, ಗಿರೀಶ ಆಳಜ್ಜ, ವಿನಾಯಕ ಪುಲ್ಲಿ ಎಂದು ಗುರುತಿಸಲಾಗಿದೆ.
ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ ಥಾರ್, ಮಹೇಂದ್ರ ಬುಲೆರೋ ಹಾಗೂ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಪಾಯಕಾರಿ ಚಾಲನೆ ಮತ್ತು ಸಾರ್ವಜನಿಕರ ಜೀವಕ್ಕೆ ಅಪಾಯ ತಂದ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಪ್ರೀತಿಸಿದ ಯುವತಿಗೆ ಬೇರೊಬ್ಬನೊಂದಿಗೆ ಮದುವೆ ನಿಶ್ಚಯ | ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ


















