ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಳೆದ ಒಂದು ವಾರದಿಂದ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನ ವಸತಿ ಪ್ರದೇಶದ ಸಮೀಪವೇ ಸಂಚರಿಸುತ್ತಿರುವುದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ.
ಸ್ಥಳೀಯರ ಮೊಬೈಲ್ ಫೋನ್‌ಗಳಲ್ಲಿ ಚಿರತೆ ದೃಶ್ಯಗಳು ಸೆರೆಹಿಡಿಯಲ್ಪಟ್ಟಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಚಿರತೆ ಮಾನವ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಹಿನ್ನೆಲೆ, ಯಾವುದೇ ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆಯನ್ನು ಹಿಡಿಯಲು ಬೋನ್ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬಂಡೀಪುರ ಅರಣ್ಯದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ವಿರೋಧ | ಸಂಜೀವಿನಿ ಟ್ರಸ್ಟ್ ಹಸಿರು ಪಡೆಯ ನೇತೃತ್ವದಲ್ಲಿ ಪ್ರತಿಭಟನೆ



















