ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಸಮೀಪದ ಫಿಲ್ಮ್ ಸಿಟಿ ಬಳಿ ಆಯೋಜಿಸಲಾಗಿದ್ದ ಕಾರ್ ರೇಸ್ ವೇಳೆ ಭೀಕರ ಅಪಘಾತ ಸಂಭವಿಸಿದೆ. ರೇಸ್‌ನಲ್ಲಿ ಭಾಗಿಯಾಗಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ ರೇಸ್‌ನಲ್ಲಿ ಭಾಗವಹಿಸಿದ್ದ ಪ್ರಜ್ವಲ್ ಚಾಲನೆ ಮಾಡುತ್ತಿದ್ದ ಕಾರು ವೇಗದ ವೇಳೆ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಹಾನಿಗೊಳಗಾದರೂ, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತದಲ್ಲಿ ಚಾಲಕ ಪ್ರಜ್ವಲ್ ಅವರ ಕೈಗೆ ಗಾಯವಾಗಿದ್ದು, ತಕ್ಷಣ ಚಿಕಿತ್ಸೆ ನೀಡಲಾಗಿದೆ. ರೇಸ್ ನಡೆಯುತ್ತಿದ್ದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ : ಹಾವೇರಿ | ನಾಡ ಬಾಂಬ್ ಸ್ಟೋಟ ; 2 ಹೋರಿಗಳು ಸಾವು



















