ಉಡುಪಿ | ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಮಾರುತಿ ಡಿಸೈರ್ ಕಾರೊಂದು ರಸ್ತೆ ಮಧ್ಯದಲ್ಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ.
ಕಾರಿನ ಇಂಜಿನ್ ಭಾಗದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಅದರಲ್ಲಿದ್ದ ಮನೆಯ ನಾಲ್ವರು ಸದಸ್ಯರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಎಲ್ಲರೂ ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಧಾವಿಸಿ ಬಂದಿದ್ದಾರೆ. ಅಕ್ಕಪಕ್ಕದ ಮನೆಗಳಿಂದ ಪೈಪ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಇದನ್ನೂ ಓದಿ : ಬೆಳ್ತಂಗಡಿ ಕಿಡ್ನಾಪ್ ಕೇಸ್‌ಗೆ ಮಹಾ ಟ್ವಿಸ್ಟ್.. ವಿಧ್ಯಾರ್ಥಿನಿಯ ಡ್ರಾಮಾಕ್ಕೆ ಪೊಲೀಸರೇ ದಂಗು!



















