ಪುತ್ತೂರು : ಪುತ್ತೂರಿನ ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ.
ಈ ಸಂಬಂಧ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ವಿಚಾರಣೆ ನಡೆಯಲಿದೆ. ಆದ್ದರಿಂದ ಅಜಿತ್ ರೈ ಸ್ವಯಂ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಬೇಕು. ತಪ್ಪಿದಲ್ಲಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ಉಪ ವಿಭಾಗೀಯ ದಂಡಾಧಿಕಾರಿಯೂ ಆಗಿರುವ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ : ವೀಲ್ಹ್ ಕಟ್ ಆಗಿ ತೋಟಕ್ಕೆ ನುಗ್ಗಿದ ಬಸ್ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!



















