ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2026) ಖಾಲಿ ಇರುವ 27 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 27 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 27
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 14
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂಬಿಎ, ಸಿಎ, ಸಿಎಂಎ ಕೋರ್ಸ್ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಕರ್ನಾಟಕದ ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.8 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಬ್ಯಾಂಕ್ ಆಫ್ ಬರೋಡಾದಲ್ಲಿ 253 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ



















