ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕಕ್ ನಿಂದ ಕೆಂಪೇಗೌಡ ಏರ್ಪೊಟ್ ಗೆ ಬಂದಿದ್ದ ಓರ್ವ ಪ್ರಯಾಣಿಕನ ಲಗ್ಗೆಜ್ ಬ್ಯಾಗ್ ಬಗ್ಗೆ ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಲಗ್ಗೆಜ್ ಬ್ಯಾಗ್ ನಲ್ಲಿ ಅಕ್ರಮವಾಗಿ ಮಿಠಾಯಿ ಕ್ಯಾಂಡಿ ಪಾಕೇಟ್‌ಗಳಲ್ಲಿದ್ದ 1.7 ಕೆಜಿ ಹಶೀಶ್, ಚರಸ್ ಸೇರಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ಸೀಜ್ ಮಾಡಿದ್ದಾರೆ.
ಈ ಘಟನಾ ಸಂಬಂಧ ಆರೋಪಿಯ ಮೇಲೆ ಸದ್ಯ ಎನ್.ಡಿ.ಪಿ.ಎಸ್ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್



















