ಬೆಂಗಳೂರು : ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ.
ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಿದ್ದರಿಂದ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ನಿಧಾನವಾಗಿ ಸಾಗುವಂತಾಯಿತು. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಇದನ್ನೂ ಓದಿ : ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ



















