ಬಳ್ಳಾರಿ | 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ ಸಾರಥ್ಯದಲ್ಲೇ 2028 ಚುನಾವಣೆಗೆ ಹೋಗುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವರದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ, 2028ವರೆಗೆ ಅವರೆ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ.
ನಮ್ಮದು ಹೈಕಮಾಂಡ್ ಪಕ್ಷ, ಮುಖ್ಯಮಂತ್ರಿ ಬದಲಾವಣೆ ಮಾಡುವುದು ನಮ್ಮ ಹಾಗೂ ನಾಗೇಂದ್ರ ಅವರ ಕೈಯಲ್ಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಚಿವ ಜಮೀರ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!



















