ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಬೈರತಿ ಬಸವರಾಜ್ನ್ನು ಸಿಐಡಿ ಟೀಂ ಬಂಧಿಸಿದೆ. ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಬೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಇದೀಗ ಅವರಿಗೆ ಮುಳುವಾಗಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ–6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುಪ್ರೀಂನಲ್ಲಿ ನಿರೀಕ್ಷಣಾ ಜಾಮೀನು ವಜಾ
ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು. ಬೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತ್ತು. ಕೊಲೆ ಪ್ರಕರಣದಲ್ಲಿ ಸರಣಿ ಘಟನೆಗಳು ಪೂರಕವಾಗಿ ನಡೆದಿದೆ. 2 ಗುಂಪುಗಳು ಜಗಳ ಆಡುವಾಗ ಆರೋಪಿತ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಸ್ತಿಯ ಜಿಪಿಎ ತೋರಿಸಿದ್ದಾರೆ. ಬಿಕ್ಲು ಶಿವನಿಗೆ ತಾಯಿಯ ಮುಂದೆ ಗನ್ ತೋರಿಸಲಾಗಿದೆ. ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದಾಗ ಗನ್ ಹೊಂದಿರುವ ವ್ಯಕ್ತಿ ಜಗದೀಶ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಳಿಕ ಇವರು ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ. ಬೈರತಿ ಬಸವರಾಜ್ ವಿಚಾರಣೆ ಎದುರಿಸಬೇಕು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಾಗ ಹೇಗೆ ಇರಬೇಕು ಅಂತ ಗೊತ್ತಿಲ್ವಾ ಅಂತ ಕೋರ್ಟ್ ಗರಂ ಆಗಿ ಪ್ರಶ್ನಿಸಿತ್ತು.
ಇದನ್ನೂ ಓದಿ : ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್



















