ಹೊಸಕೋಟೆ: ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದೆ.
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ದುರಂತದಲ್ಲಿ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸರಕು ವಾಹನ, ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಡಿಕ್ಕಿಯಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ದೇವನಳ್ಳಿ ಕಡೆಗೆ ಬರುತ್ತಿದ್ದ ಕೆಎ 03 ಎನ್‌ಡಬ್ಲ್ಯು 0138 ಸಂಖ್ಯೆಯ ವಾಹನವೂ ಅಪಘಾತಕ್ಕೀಡಾಗಿದೆ. ವಾಹನದಲ್ಲಿದ್ದ ಆರು ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರು ಗ್ರಾಮಂತರ ವ್ಯಾಪ್ತಿಯ ಹೊಸಕೋಟೆ ಹೊರವಲಯದಲ್ಲಿ ನಡೆದ ಈ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ



















